
ಬೇಲೂರು ಪಟ್ಟಣದಲ್ಲಿ ಸ್ಕ್ರಾಪ್ಗೆಂದು ನಿಲ್ಲಿಸಿದ್ದ ಎರಡು ಹಳೆಯ ಲಾರಿಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ನಡೆದಿದೆ.
ಬೇಲೂರು ತಾಲೂಕು ಕಚೇರಿ ಹಿಂಭಾಗದ ಖಾಲಿ ಜಾಗದಲ್ಲಿ ಲಾರಿ ಮಾಲೀಕರು ಎರಡು ಹಳೆಯ ಲಾರಿಗಳನ್ನು ನಿಲ್ಲಿಸಿದ್ದರು. ಶನಿವಾರ ಮಧ್ಯಾಹ್ನದ ವೇಳೆ ಆಕಸ್ಮಿಕವಾಗಿ ಲಾರಿಗಳಿಗೆ ಬೆಂಕಿ ತಗುಲಿದೆ. ಬಿಸಿಲು ಮತ್ತು ಗಾಳಿ ಹೆಚ್ಚಾಗಿದ್ದರಿಂದ ಒಂದೇ ಸಮನೆ ಎರಡೂ ಲಾರಿಗಳು ಹೊತ್ತಿ ಉರಿಯಲಾರಂಭಿಸಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ.

ಲಾರಿಗಳು ಹೊತ್ತಿ ಉರಿಯುತ್ತಿದ್ದುದ್ದನ್ನು ಕಂಡ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದು, ಜತಗೆ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಕಪಕ್ಕದ ಮನೆಗಳಿಗೆ ಬೆಂಕಿ ತಾಗಿ ಭಾರೀ ದುರಂತ ಸಂಭವಿಸುವ ಎಲ್ಲ ಸಾಧ್ಯತೆಗಳು ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿದ್ದೀರಾ? ವಿಜಯನಗರ | ಕುರಿ ಹಟ್ಟಿಯಲ್ಲಿ ಬೆಂಕಿ; 55 ಮೇಕೆ, ಎರಡು ಟಗರು ಸುಟ್ಟು ಭಸ್ಮ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳದಲ್ಲಿ ಪಿಎಸ್ಐ ಶಿವಾನಂದ ಜಿ ಪಾಟೀಲ್, ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಧರ್ಮಯ್ಯ ಮತ್ತು ಸಿಬ್ಬಂದಿ ಇದ್ದರು.