ಹಾಸನ : ಆನೆ ದಾಳಿಯಿಂದ ಮೃತಪಟ್ಟ ಪ್ರಕರಣದ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಾರ್ವಜನಿಕವಾಗಿ ಬಟ್ಟೆಗಳನ್ನು ಬಿಚ್ಚಲಾಗುತ್ತದೆಂದು ಬೆದರಿಕೆ ಹಾಕಿ. ಅವಾಚ್ಯ ಶಬ್ದಗಳಿಂದ ನಿಂಧಿಸಿರುವ ಶಾಸಕ ಹೆಚ್.ಕೆ. ಸುರೇಶ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಸಂಘದಿAದ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಆಗಮಿಸಿ ಉಪವಿಭಾಗಾಧಿಕಾರಿ ಮಾರುತಿ ಅವರಿಗೆ ಮನವಿ ಸಲ್ಲಿಸಿದರು.
ಇದೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಕೃಷ್ಣ ಮಾತನಾಡಿ, ಕಳೆದ ಒಂದು ದಿನಗಳಷ್ಟೆ ಬೇಲೂರು ವಲಯದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣದ ಸಂದರ್ಭದಲ್ಲಿ ಬೇಲೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಕೆ. ಸುರೇಶ್ ರವರು ಇಲಾಖಾ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಕಸ್ಮಿಕವಾಗಿ ಕಾಡಾನೆ ದಾಳಿಯಿಂದ ಬೆಳ್ಳಾವರ ಗ್ರಾಮದ ಮಹಿಳೆಯೊಬ್ಬರು ಮೃತಪಟ್ಟಿರುತ್ತಾರೆ. ಅರಣ್ಯ ಇಲಾಖೆಯಿಂದ ಕಾಡಾನೆಗಳ ಕುರಿತು ಬೆಳ್ಳಾವರ ಗ್ರಾಮದಲ್ಲಿ ಪ್ರಚಾರ ಪಡಿಸಿ, ಮುಜಾಗ್ರತೆ ವಹಿಸುವಂತೆ ಗ್ರಾಮಾಸ್ಥರಿಗೆ ಸೂಕ್ತ ಎಚ್ಚರಿಕೆಯನ್ನು ಜಿಲ್ಲಾ ಆನೆ ಕಾರ್ಯಪಡೆ ವತಿಯಿಂದ ನೀಡಿ, ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾಗಿಯೂ ಆಕಸ್ಮಿಕವಾಗಿ ವಯೋವೃದ್ಧ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರಿಂದ ಸ್ಥಳಕ್ಕೆ ತ್ವರಿತವಾಗಿ ಹಾಸನ ಅರಣ್ಯ ವಿಭಾಗದ ಹಿರಿಯ ಅರಣ್ಯಾಧಿಕಾರಿಗಳಾದ ಅರಣ್ಯ ಸಂರಕ್ಷಣಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಲ್ಲಾ ಕ್ಷೇತ್ರ ಸಿಬ್ಬಂದಿಗಳು ಸದರಿ ಸ್ಥಳಕ್ಕೆ ತೆರಳಿ, ಸರ್ಕಾರದ ಮಾರ್ಗಸೂಚಿಗಳನ್ವಯ ಕ್ರಮವನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಸ್ಥಳಕ್ಕೆ ಆಗಮಿಸಿದ್ದತಂಹ ಬೇಲೂರು ವಿಧಾನ ಸಭಾ ಕ್ಷೇತ್ರ ಶಾಸಕರಾದ ಹೆಚ್.ಕೆ. ಸುರೇಶ್ ರವರು ಸಾರ್ವಜನಿಕರು ಮತ್ತು ಅಧಿಕಾರಿಗಳು ನೆರೆದಿದ್ದಂತಹ ಸಂದರ್ಭದಲ್ಲಿ ಸರ್ಕಾರದ ಕಾನೂನಾತ್ಮಕ ರೀತಿ ವಿಚಾರ ತಿಳಿದುಕೊಳ್ಳದೇ ಏಕಾಏಕಿ ಇಲಾಖೆಯ ಹಿರಿಯ ಅಧಿಕಾರಿಗಳ ಮೇಲೆ ಮನಬಂದಂತೆ ವಾಗ್ದಾಳಿಯನ್ನು ಮಾಡಿರುತ್ತಾರೆ ಎಂದು ದೂರಿದರು. ಮುಂದುವರೆದು ಸಾರ್ವಜನಿಕವಾಗಿ ಹಾಸನ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹಾಸನ ವಿಭಾಗ ಇವರನ್ನು ಏಕವಚನದಲ್ಲಿ ಬೈದು ಹಿಯಾಳಿಸಿ. ಸಾರ್ವಜನಿಕವಾಗಿ ಭಾರತೀಯ ಅರಣ್ಯ ಸೇವೆಗೆ ಸೇರಿದ ಇಲಾಖೆಯ ಅತ್ಯುನ್ನತ ಅಧಿಕಾರಿಯ ಹುದ್ದೆಗೆ, ಅಧಿಕಾರಿಗಳ ಕರ್ತವ್ಯಗಳಿಗೆ ಮತ್ತು ಅಧಿಕಾರಿಗಳ ಕುಟುಂಬದವರಿಗೆ ಒಬ್ಬ ಜವಾಬ್ದಾರಿಯುತ ಹುದ್ದೆಯಲ್ಲಿರುವ ಶಾಸಕರು ಅಮಾನುಷವಾಗಿ ಅವಹೇಳನ ಮಾಡಿದ್ದು, ಹಾಸನ ಜಿಲ್ಲೆಯ ಕೆಲವು ಜನಪ್ರತಿನಿಧಿಗಳಿಗೆ ಸರ್ಕಾರದ ರೀತಿ ರಿವಾಜುಗಳ ಬಗ್ಗೆ ಅರಿವಿದ್ದರು ಸಹ ಹಾಗು ಇಲಾಖಾ ಸಿಬ್ಬಂದಿಗಳು ಕಾಡಾನೆ ಹಾವಳಿ ತಡೆಗಟ್ಟಲು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಿಳುವಳಿಕೆ ಇದ್ದರೂ ಕೂಡ ಉದ್ದೇಶ ಪೂರ್ವಕವಾಗಿ ಸರ್ಕಾರಿ ಅಧಿಕಾರಿಗಳನ್ನು ನಿಂದಿಸಿರುತ್ತಾರೆ ಎಂದರು.
ಉಪ ಅರಣ್ಯ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಲಕ್ಷ್ಮಿನಾರಾಯಣ್ ಮಾಧ್ಯಮದೊಂದಿಗೆ ಮಾತನಾಡಿ, ಅಧಿಕಾರಿಗಳ ಸಂಘದ ಶಾಸಕರು ಸ್ಥಳದಲ್ಲಿ ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ನಿಂಧಿಸಿದ್ದು, ವನ್ಯಜೀವಿ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಹಾಗು ಅರಣ್ಯ ಸಂಪತ್ತನ್ನು ಸಂರಕ್ಷಿಸಲು ಹಗಲಿರುಳು ಶ್ರಮಿಸುತ್ತಿರುವ ಅಧೀನ ಸಿಬ್ಬಂದಿಗಳ ಆತ್ಮಸ್ಥೆರ್ಯವನ್ನು ಕುಗ್ಗಿಸಿರುತ್ತಾರೆ. ಶಾಸಕರು, ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಾರ್ವಜನಿಕವಾಗಿ ಬಟ್ಟೆಗಳನ್ನು ಬಿಚ್ಚಲಾಗುತ್ತದೆಂದು ಬೆದರಿಕೆ ಹಾಕಿ. ಅವಾಚ್ಯ ಶಬ್ದಗಳಿಂದ ನಿಂಧಿಸಿ, ಈ ಘಟನೆಯನ್ನು ತಮ್ಮ ದುರುದ್ದೇಶಕ್ಕಾಗಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಮಾನ್ಯ ಶಾಸಕರ ಪ್ರಚೋದನೆಗಳಿಂದ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ಇವರಿಗೆ ಯಾವುದೇ ಅನಾಹುತಗಳಾದರೂ ಶಾಸಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಸಿದರು. ಈ ರೀತಿಯ ಬೆಳವಣಿಗೆಗಳಿಂದ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಉಂಟಾಗಿದ್ದು, ಈ ಜನಪ್ರತಿನಿದಿಗಳು ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಘನತೆ ಗೌರವಗಳಿಗೆ ಕುತ್ತು ತಂದಿದ್ದು, ಅರಣ್ಯ ಭೂಗಳ್ಳರಿಗೆ, ಅರಣ್ಯ ಸಂಪತ್ತನ್ನು ಲೂಟಿ ಮಾಡುವವರಿಗೆ ಪರೋಕ್ಷವಾಗಿ ಸಹಕಾರ ಹಾಗ ಪ್ರಚೋದನೆಯನ್ನು ನೀಡಿದ್ದು, ಅಮೂಲ್ಯವಾದ ಅರಣ್ಯ ಮತ್ತು ವನ್ಯಜೀವಿಗಳ ಅವನತಿಗೆ ಪರೋಕ್ಷವಾಗಿ ಕಾರಣಕರ್ತರಾಗುತ್ತಿದ್ದಾರೆ ಎಂದು ಆರೋಪಿಸಿದರು. ಆದುದರಿಂದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಹಾಗೂ ಅರಣ್ಯ ಸಂಪತ್ತನ್ನು ರಕ್ಷಿಸಲು ಹಗಲಿರಳು ಶ್ರಮ ವಹಿಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರುತ್ತಾ, ಸೂಕ್ತ ಭದ್ರತೆಯಿಲ್ಲದೆ ಅರಣ್ಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅರಣ್ಯ ರಕ್ಷಣೆಯ ಕರ್ತವ್ಯ ನಿರ್ವಹಿಸುವುದು ಕಷ್ಟಸಾಧ್ಯವಾಗುವುದರಿಂದ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವರೆಗೂ ಎಲ್ಲಾ ಸಿಬ್ಬಂದಿ ಹಾಗು ನೌಕರರು ಸಾಮೂಹಿಕ ರಜೆ ಮೇಲೆ ತೆರಳಲು ನಿರ್ಧರಿಸಿರುವುದಾಗಿ ಈ ಮೂಲಕ ತಮ್ಮ ಅವಗಾಹನೆಗೆ ತರಬಯಸುತ್ತೇವೆ. ಒಂದು ವೇಳೆ ಸಾಮೂಹಿಕವಾಗಿ ರಜೆಯ ಮೇಲೆ ತೆರಳಿದ ಸಂದರ್ಭದಲ್ಲಿ ಅರಣ್ಯ ಸಂಪತ್ತಿಗೆ ಹಾಗೂ ವನ್ಯಪ್ರಾಣಿಗಳಿಗೆ ಮತ್ತು ವನ್ಯಪ್ರಾಣಿಗಳಿಂದ ಸಾರ್ವಜನಿಕರಿಗೆ ಯಾವುದೇ ಹಾನಿ ಉಂಟಾದಲ್ಲಿ ಮಾನ್ಯ ಶಾಸಕರನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
ಇದೆ ವೇಳೆ ಅರಣ್ಯ ಅಧಿಕಾರಿಗಳ ಸಂಘದ ಯತೀಶ್, ದಿಲೀಪ್, ಚಂದ್ರೇಗೌಡ, ಮಧುಸೂದನ್, ಕಲಂದರ್, ಮೋಹನ್, ತೇಜಸ್ವಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು