ಹಾಸನ : ಜನಸಾಮಾನ್ಯರ ಮೆರಲಿನ ಕಾಳಜಿಯಿಂದ ಕಾಡಾನೆ ಸಮಸ್ಯೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕರು ಏರುಧ್ವನಿಯಲ್ಲಿ ಮಾತನಾಡಿದ್ದು, ಇದನ್ನು ಬೇರ ಸ್ವರೂಪಕ್ಜೆ ಕೊಂಡೂಯ್ಯುವುದು ಬೇಡ ಎಂದು ಜಿಲ್ಲಾ ಪ್ಲಾಂಟರ್ ಸಂಘದ ಅಧ್ಯಕ್ಷ ಎ.ಎಸ್. ಪರಮೇಶ್ ಮತ್ತು ಸುರೇಂದ್ರ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಮಲೆನಾಡಿನ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಕಳೆದ 10-15 ವರ್ಷಗಳಿಂದ ಕಾಡಾನೆ ಮತ್ತು ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಸಾಗಿದ್ದು, ಮಾನವ-ಆನೆ ಸಂಘರ್ಷಕ್ಕೆ ನೂರಾದ 10-15 ವರ್ಷಗಳಿಂದ ಬಲಿಯಾಗಿವೆ. ಕಾಫಿ ತೋಟಗಳನ್ನೇ ಆವಾಸ ಸ್ಥಾನವಾಗಿ ಮಾಡಿಕೊಂಡಿರುವ ಕಾಡಾನೆಗಳು ಅಪಾರ ಪ್ರಮಾಣದಲ್ಲಿ ಬೆಳೆಹಾನಿ, ಜೀವಹಾನಿ ಮಾಡುತ್ತಿವೆ. ಎಂದರು. ಆನೆಗಳ ಸಂತತಿಯು ಕ್ಷಿಪ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಮಲೆನಾಡಿನಲ್ಲಿ ಆತಂಕದ ಛಾಯೆ ಮನೆಮಾಡಿದೆ. ಕಾಡಾನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಕಾಫಿ ಬೆಳೆಗಾರ ಸಂಘಟನೆಗಳು ನಿರಂತರವಾಗಿ ಹೋರಾಟ ನೆಡೆಸುತ್ತಿವೆ. ಆದರೂ ಸಹ ಸರ್ಕಾರ ಮತ್ತು ಅರಣ್ಯ ಇಲಾಖೆ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿಕೊಡುವಲ್ಲಿ ವಿಫಲವಾಗಿವೆ ಎಂದು ದೂರಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಮತ್ತು ಶಾಸಕಾಂಗಗಳು ಒಟೊಟ್ಟಾಗಿ ಸಮಾನ ಮನಸ್ಥಿತಿಯಿಂದ ಸಾಗಿದಾಗ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಅಭಿವೃದ್ಧಿ ಪತದತ್ತ ಸಾಗಲು ಸಾಧ್ಯ. ಹಾಗಾಗಿ ಕಾಡಾನೆ ಸಮಸ್ಯೆಯ ವಿಚಾರವಾಗಿ ಶಾಸಕರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳಿಗೆ ಗಂಭೀರ ಸ್ವರೂಪ ನೀಡದೆ ಜನಸಾಮಾನ್ಯರಿಗೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಡುವ ನಿಟ್ಟಿನಲ್ಲಿ ಹೆಚ್ಚು ಆಧ್ಯತೆ ನೀಡಿ ಮುಂದುವರೆಯಬೇಕಾಗಿದೆ. ಕೆಲವೊಮ್ಮೆ ಸಮಾಜದ ಅಂಕುಡೊAಕುಗಳನ್ನು ತಿದ್ದುವಾಗ ಜನಪ್ರತಿನಿಧಗಳು, ಮಾಧ್ಯಮಗಳು ಕಠಿಣ ನಿಲುವು ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿರುವುದರಿಂದ ಈ ಘಟನೆಯ ಬಗ್ಗೆ ಬೇರೆ ಬೇರೆ ಸ್ವರೂಪಕ್ಕೆ ಕೊಂಡೊಯ್ಯುವ ಅವಶ್ಯಕತೆಯಿಲ್ಲವೆಂಬುದು ಸಂಘಟನೆಯ ನಿಲುವಾಗಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬಸವರಾಜು, ಸಂಜಯ್, ಸುರೇಂದ್ರ, ಮಂಜುನಾಥ್ ಶೆಟ್ಟಿ ಇತರರು ಉಪಸ್ಥಿತರಿದ್ದರು.