
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡುವೆ ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗಿದೆ ಎಂದು ದೆಹಲಿ ಸಚಿವ, ಗ್ರೇಟರ್ ಕೈಲಾಶ್ ಕ್ಷೇತ್ರದ ಎಎಪಿ ಅಭ್ಯರ್ಥಿ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶಗಳ ಕುರಿತು ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, “ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗಿದೆ. ಆದರೆ ಅರವಿಂದ್ ಕೇಜ್ರಿವಾಲ್ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದ ಇ.ಡಿ, ಸಿಬಿಐ, ಆದಾಯ ತೆರಿಗೆ, ಚುನಾವಣಾ ಆಯೋಗ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳನ್ನು ಎಎಪಿ ವಿರುದ್ಧ ಬಳಸಲಾಗಿದೆ. ಆದರೆ ಜನರ ಆಶೀರ್ವಾದ ಎಎಪಿ ಜತೆಗಿದೆ. ಜನರು ಅರವಿಂದ್ ಕೇಜ್ರಿವಾಲ್ ಅವರನ್ನು 4ನೇ ಬಾರಿಗೆ ಮುಖ್ಯಮಂತ್ರಿ ಮಾಡಲಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಯಾವುದೇ ರೀತಿಯ ಪ್ರಯತ್ನಗಳು ವಿಫಲವಾಗುತ್ತವೆಯೇ ಹೊರತು ಪ್ರಯೋಜನವಾಗುವುದಿಲ್ಲ” ಎಂದು ಹೇಳಿದ್ದಾರೆ.