
ಹಾಸನ: ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಗೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಮಾಚಿ ದೇವರಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾಧ್ಯಮದೊಂದಿಗೆ ಶಾಸಕರು ಮಾತನಾಡಿ, ಮೊದಲು ಮಡಿವಾಳ ಮಾಚಿ ದೇವರ ಶುಭಾಶಯಗಳನ್ನು ಕೋರುತ್ತೇನೆ. ಮಡಿವಾಳ ಜನಾಂಗದವರು ಹೆಚ್ಚು ಒಗ್ಗಟ್ಟನ್ನು ಪ್ರದರ್ಶನ ಮಾಡಬೇಕು. ಪ್ರತಿ ಸಮಾಜದಲ್ಲೂ ಸಹ ವಯಶಿಷ್ಟತೆ ಮತ್ತು ಒಗ್ಗಟ್ಟನ್ನು ತೋರಿಸುವ ಸಂದರ್ಭದಲ್ಲಿ ಈ ಸಮಾಜದವರು ಇನ್ನಷ್ಟು ಒಗ್ಗಟ್ಟನ್ನು ಪ್ರದರ್ಶಿಸಬೇಕಾಗಿದೆ ಎಂದರು. ಮಡಿವಾಳದವರು ರಾಜಕೀಯವಾಗಿ ಹಾಗೂ ನೌಕರಿಗೆ ಸಂಬAಧಪಟ್ಟAತೆ ಮತ್ತು ಮೀಸಲಾತಿಗೆ ಸಂಬAಧಿಸಿದAತೆ ಹೋರಾಟವನ್ನು ಮಾಡುವ ಮೂಲಕ ತಮಗೆ ಸಿಗಬೇಕಾದ ಹಕ್ಕನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಇದೆ ವೇಳೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ಗೌರವಾಧ್ಯಕ್ಷ ಈ. ಕೃಷ್ಣೇಗೌಡ, ಮಡಿವಾಳ ಮಾಚಿದೇವ ಸಂಘದ ರಾಜ್ಯಾಧ್ಯಕ್ಷೆ ವಿಜಯಲಕ್ಷಿö್ಮಅಂಜನಪ್ಪ, ಜಿಪಂ ಉಪ ಕಾರ್ಯದರ್ಶಿ ಚಂದ್ರಶೇಖರ್ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ, ಕನ್ನಡ ಮತ್ತು ಸಂಸ್ಕöÈತ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಪಿ. ತಾರನಾಥ್, ಗೊರೂರು ಶಿವೇಶ್, ನಿರ್ದೇಶಕ ಮಲ್ಲೇಶ್, ಮುರುಳಿ, ಗೋವಿಂದಪ್ಪ, ರಘು ಇತರರು ಉಪಸ್ಥಿತರಿದ್ದರು.