
ಪೆರೋಲ್ ವೇಳೆ ಪರಾರಿಯಾಗಿದ್ದ 2002ರ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಕಳ್ಳತನ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
“ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಈತ 2024ರ ಸೆಪ್ಟೆಂಬರ್ 17ರಂದು ಏಳು ದಿನಗಳ ಪೆರೋಲ್ನಲ್ಲಿ ಜೈಲಿನಿಂದ ಹೊರಬಂದಿದ್ದ. ಆದರೆ ಪೆರೋಲ್ ಅವಧಿ ಮುಗಿದ ಬಳಿಕ ಜೈಲಿಗೆ ವಾಪಸಾಗದೆ ತಲೆಮರೆಸಿಕೊಂಡಿದ್ದ” ಎಂದು ಹೇಳಿದ್ದಾರೆ.
ಇದನ್ನೂ ಓದಿದ್ದೀರಾ? ದೆಹಲಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಇಂದು ಕೊನೆ ದಿನ
“ಪುಣೆಯ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪದ ಮೇಲೆ ಜರ್ದಾ ಸೇರಿ ಆತನ ಸಹಚರರನ್ನೂ ಜನವರಿ 22ರಂದು ಬಂಧಿಸಲಾಗಿತ್ತು. ತನಿಖೆಯ ವೇಳೆ ಈತ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಅಪರಾಧಿ ಎಂಬುದು ಬಹಿರಂಗವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.