
ಉತ್ತರ ಪ್ರದೇಶದ ಪ್ರಯಾಗ್ ರಾಜ್ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಗಂಗಾ-ಯಮುನಾ ಸಂಗಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಬೆಳಗಾವಿ ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ, ಇವರ ಪುತ್ರಿ ಮೇಘಾ ಹತ್ತರವಾಠ, ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ, ಶಿವಾಜಿನಗರದ ನಿವಾಸಿ ಮಹಾದೇವಿ ಮೃತಪಟ್ಟಿದ್ದು, ಸರೋಜಿನಿ ನಡುವಿನಹಳ್ಳಿ ಎಂಬುವವರು ಗಾಯಗೊಂಡಿದ್ದಾರೆ.
ಗಾಯಗೊಂಡವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದ್ದು, ಕಾಲ್ತುಳಿತ ಸಂಭವಿಸಿದ ಬಳಿಕ ಅನೇಕರು ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರಿಂದ ಬೇರ್ಪಟ್ಟಿದ್ದಾರೆ.
“ಬೆಳಗಾವಿಯಿಂದ ಸುಮಾರು 60 ಮಂದಿ ಎರಡು ಬಸ್ಗಳಲ್ಲಿ ಪ್ರಯಾಗ್ ರಾಜ್ಗೆ ಪ್ರಯಾಣಿಸಿ ಪವಿತ್ರ ಸ್ನಾನ ಮಾಡಲು ಗಂಗಾ-ಯಮುನಾ ಸಂಗಮ ತಲುಪಿದ್ದು, ಇದ್ದಕ್ಕಿದ್ದಂತೆ, ಆರಂಭವಾದ ಕಾಲ್ತುಳಿತದಲ್ಲಿ ಅನೇಕರು ಕಾಣೆಯಾಗಿದ್ದು, ಕೆಲವರು ಕಾಲ್ತುಳಿತಕ್ಕೊಳಗಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿದ್ದೀರಾ? ರಾಯಚೂರು | ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸುತ್ತಿದ್ದ ಶುಚಿ ಯೋಜನೆ ಸ್ಥಗಿತ; ಬಡ ವಿದ್ಯಾರ್ಥಿನಿಯರಿಗೆ ಸಂಕಷ್ಟ
“ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬೆಳಗಾವಿಯಿಂದ ಜನರನ್ನು ಕರೆದೊಯ್ದಿದ್ದ ಟ್ರಾವೆಲ್ ಏಜೆನ್ಸಿಯೊಂದಿಗೆ ಆಡಳಿತವು ನಿರಂತರವಾಗಿ ಸಂಪರ್ಕದಲ್ಲಿದೆ. ಬೆಳಗಾವಿಯ ನಾಲ್ವರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಅವರ ಶವಗಳನ್ನು ತರಲು ಕ್ರಮ ವಹಿಸಲಾಗಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದ್ದಾದಾರೆ.