ಹಾಸನ : ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್ನಲ್ಲಿದ್ದ ಒಂಟಿಸಲಗವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದು, ಈ ಮೂಲಕ ಮೊದಲ ದಿನದ ಸೆರೆ ಕಾರ್ಯಾಚರಣೆಯಲ್ಲೇ ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿಯ ಪ್ರಮಾಣ ಹೆಚ್ಚಾದ ಹಿನ್ನೆಲೆ ಸರ್ಕಾರ ಮೂರು ಪುಂಡಾನೆಗಳ ಸೆರೆಗೆ ಅನುಮತಿ ನೀಡಿದ್ದು, ಇಂದಿನಿಂದ ಅಧಿಕೃತ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಅರವಳಿಕೆ ಮದ್ದು ನೀಡಿ ಅರಣ್ಯ ಸಿಬ್ಬಂದಿ ಕಾಡಾನೆಯನ್ನ ಸೆರೆ ಹಿಡಿದಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾಡಾನೆ ಸೆರೆ ಯಶಸ್ವಿ ಆಗಿದೆ.