
ಮೂರು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟ್ಹಾ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಸಂಬಂಧಿಯೋರ್ವ ತಮ್ಮ ಮಗಳಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಮನೆಯಿಂದ ಹೊರಕ್ಕೆ ಕರೆದೊಯ್ದಿದ್ದು ಬಳಿಕ ಅತ್ಯಾಚಾರ ಎಸಗಿದ್ದಾನೆಂದು ಶನಿವಾರ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಹೀರಾ ಲಾಲ್(40) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೋತ್ವಾಲಿ ನಗರ ಪೊಲೀಸ್ ಠಾಣೆಯ ಎಸ್ಎಚ್ಒ ರಾಜೇಶ್ ಕುಮಾರ್ ಸಿಂಗ್, “ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ವೈದ್ಯಕೀಯ ಚಿಕಿತ್ಸೆ ಮತ್ತು ಪರಿಶೀಲನೆಗಾಗಿ ಮೂರು ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ? ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ಹಿಂದುತ್ವವಾದಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ
ದೇಶದಲ್ಲಿ ಪುಟ್ಟ ಮಕ್ಕಳ ಮೇಲೆ, ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿವೆ. ಎನ್ಜಿಒ ಸಿಆರ್ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇ.96ರಷ್ಟು ಏರಿಕೆಯಾಗಿವೆ. ಇನ್ನೂ ಹಲವು ಪ್ರಕರಣಗಳು ವರದಿಯೇ ಆಗಿಲ್ಲ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿವೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ. ಅತ್ಯಾಚಾರಕ್ಕೆ ಹೆಣ್ಣುಮಕ್ಕಳ ಬಟ್ಟೆಯೇ ಕಾರಣ ಎನ್ನುವವರು ಮೂರು ವರ್ಷದ ಬಾಲಕಿ ಮೇಲೆ ಯಾವ ಬಟ್ಟೆ ಕಾರಣಕ್ಕೆ ಅತ್ಯಾಚಾರವಾಗುತ್ತದೆ ಎಂಬುದಕ್ಕೆ ಉತ್ತರಿಸಬೇಕಾಗುತ್ತದೆ ಎನ್ನಲಾಗುತ್ತಿದೆ.