
ರಾಜ್ಯದ ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಕಾನೂನು ತಿದ್ದುಪಡಿ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ವಿಜಯಪುರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಬಸವೇಶ್ವರ ಉದ್ಯಾನವನದಲ್ಲಿ ಸಭೆ ನಡೆಸಿದ ಬಳಿಕ ಪಾದಯಾತ್ರೆ ಮೂಲಕ ಶಿರಸ್ತೇದಾರ ಎ ಎಚ್ ಬಳೂರಗಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ರೈತರಿಗೆ ತಮ್ಮ ಜಮೀನುಗಳಿಗೆ ದಾರಿ ಇಲ್ಲದೆ ತೊಂದರೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಅಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯಗಳ ನೀರು ಮರು ಹಂಚಿಕೆ ಮಾಡಿ ವಿಜಯಪುರ ಜಿಲ್ಲೆಯ ರೈತರಿಗೆ ನ್ಯಾಯ ದೊರಕಿಸಬೇಕು” ಎಂದರು.
ಈ ವೇಳೆ ಅಖಂಡ ಕರ್ನಾಟಕ ರೈತ ಸಂಘ ವಿಜಯಪುರ ಜಿಲ್ಲಾ ಘಟಕದ ಕಾರ್ಯಕರ್ತರು ಇದ್ದರು.